ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17.  ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ ವಾಸಿಸುತ್ತಿದ್ದ ನಿವಾಸವನ್ನು ಪರಿಶೀಲಿಸಲು ಮನೆಯ ಮಾಲೀಕರ ಬಳಿ ಕೇಳಿಕೊಂಡಿದ್ದಾರೆ. ಅದರಂತೆ ಮನೆ ಮಾಲೀಕರು ಬಾಡಿಗೆ ಮನೆ ಬಳಿ ಹೋಗಿ ನೋಡಿದಾಗ ಮೋಹನ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ದೇಹ ಬಹುತೇಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಈ ಘಟನೆ ಬಗ್ಗೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಉಪನ್ಯಾಸಕರ ನೇಮಕಾತಿ ಮತ್ತು ವಿಶ್ವವಿದ್ಯಾನಿಲಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

 

error: Content is protected !!
Scroll to Top