ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ – News Kadaba

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಮೃತಪಟ್ಟಿರುವ ಕುರಿತು ವರದಿಯಾಗಿದೆ.

ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್ ನ ಅಗತ್ಯವಿದ್ದ ಹಿನ್ನೆಲೆ ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸಣೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡಾ ಹೊಂದಾಣಿಕೆಯಾಗದೇ ಇದ್ದು, ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹಾಗಾಗಿ ಅರ್ಚನಾ ಲಿವರ್ ಭಾಗ ದಾನಕ್ಕೆ ಒಪ್ಪಿದ್ದರು. ಅದರಂತೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾರ ಲಿವರ್‌ನ ಭಾಗಶಃ ಭಾಗ ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆದಿತ್ತು. ಅಲ್ಲದೇ ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆ ಕೂಡಾ ಹೊಂದಿದ್ದರು ಎನ್ನಲಾಗಿದೆ. ಬಳಿಕ 4 ದಿನಗಳ ಹಿಂದೆ ಅರ್ಚನಾ ಏಕಾಏಕಿ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರದಂದು ಮೃತಪಟ್ಟಿದ್ದಾರೆ. ಇನ್ನು ಅರ್ಚನಾರಿಂದ ಲಿವರ್ ದಾನ ಪಡೆದ ಮಹಿಳೆ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ.

Scroll to Top