ಸಿಎಂ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಹಾಕಿದ್ದ ಪ್ರಕರಣ- ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆಳ್ತಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 17. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್(CM) ಎಂದು ಪೋಸ್ಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಶಾಸಕ ಹರೀಶ್‌ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಹಾಕಿರುವ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು 26/10/2023 ರಂದು IPC 1860(U/s-504,505(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ಸಾಮಾಜಿಕ ತಾಣಗಳ ಸಂಸ್ಥೆಗಳಿಂದ ಎಡಿಟ್ ಮಾಡಿದ ಪೋಸ್ಟ್ ಗಳ ವರದಿ ತರಿಸಿಕೊಂಡು ತನಿಖೆ ಮಾಡಿ ಒಂದು ವರ್ಷದ ಬಳಿಕ ಬೆಂಗಳೂರು ಜನ ಪ್ರತಿನಿಧಿಗಳ ಕೋರ್ಟ್ ನಲ್ಲಿ ಬೆಳ್ತಂಗಡಿ ಪೊಲೀಸರು ಸೆ.12 ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವುದಾಗಿ ತಿಳಿದು ಬಂದಿದೆ.

Also Read  ಸುಬ್ರಹ್ಮಣ್ಯ: ಕಿರು ಸೇತುವೆಗೆ ಢಿಕ್ಕಿ ಹೊಡೆದು ಕಮರಿಗೆ ಉರುಳಿದ ಇನ್ನೋವಾ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಐವರು ಗಂಭೀರ

 

error: Content is protected !!
Scroll to Top