(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 17. ಫಿರೋಝಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 3 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಮೃತರನ್ನು ಮೀರಾದೇವಿ (45), ಅಮನ್ (20), ಗೌತಮ್ ಕುಶ್ವಾಹ (18) ಮತ್ತು ಕುಮಾರಿ ಇಚ್ಚಾ (3) ಎಂದು ಗುರುತಿಸಲಾಗಿದೆ. ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
