ಕಡಬ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಂತೂರು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂವರನ್ನು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಣ್ಣಿ ಗೌಡರವರು ಸೆ.16ರ ಸೋಮವಾರದಂದು ಮಧ್ಯಾಹ್ನದ ವೇಳೆಗೆ ಮನೆ ಸಮೀಪದ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಗಮನಿಸಿದ ಅವರ ಪುತ್ರರು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅಣ್ಣಿ ಗೌಡ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಅಣ್ಣಿ ಗೌಡ ಅವರು ವಿಪರೀತ ಅಮಲು ಪದಾರ್ಥ ಸೇವಿಸುವ ಚಟದಿಂದ ಬೇಸತ್ತು, ಮಾನಸಿಕವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಪುತ್ರ ಗಣೇಶ ಅವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join WhatsApp Group

WhatsApp Share