ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆ.30ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರಿವ ನಟ ದರ್ಶನ್ ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನದ ಅವಧಿಯನ್ನು ಸೆ. 30 ರವರೆಗೆ ವಿಸ್ತರಣೆ ಮಾಡಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ ಎನ್ನಲಾಗಿದೆ.

Scroll to Top