(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಕೇಂದ್ರ ಸರಕಾರ ಕೊಂಕಣ್ ರೈಲ್ವೇಯನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸಲು ಚಿಂತನೆ ನಡೆಸಿದ್ದು, ಈ ಕುರಿತಂತೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ರೈಲ್ವೇ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೊಂಕಣ ರೈಲ್ವೇ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ವ್ಯಾಪಿಸಿದ್ದು, ಕರ್ನಾಟಕ ರಾಜ್ಯವೊಂದರಲ್ಲೇ ಒಟ್ಟು 742 ಕಿ.ಮೀ. ಕ್ರಮಿಸುತ್ತದೆ ಎಂದು ತಿಳಿಸಿದರು. ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ವಿಚಾರವಾಗಿ ನಾವು ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿಕೊಟ್ಟ ನಂತರ, ವಿಲೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.