ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಎರಡೂವರೆ ವರ್ಷಗಳ ಹಿಂದೆ ನಗರದ ಕುಲಶೇಖರದ ಕಾಸ್ತಾಲಿನೊ ಕಾಲೋನಿ ಸೆಕ್ರೆಡ್ ಹಾರ್ಟ್ ಎಂಬಲ್ಲಿನ ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.


ಆರೋಪಿಯನ್ನು ಕಾರ್ಕಳದ ಬೆಳ್ಮಣ್ ನಿವಾಸಿ ರೋಹಿತ್ ಮಥಾಯಿಸ್ ಎಂದು ಗುರುತಿಸಲಾಗಿದೆ. ಆರೋಪಿ ಮಥಾಯಿಸ್ ಮುಂಬೈಗೆ ಪರಾರಿಯಾಗಿದ್ದನು. ಬಂಧಿತ ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

Also Read  ಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟಣೆ

error: Content is protected !!
Scroll to Top