ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ- ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 18. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯು ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ಸ್ಪರ್ಧೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯು 11 ಪ್ರಥಮ ಹಾಗೂ 2 ದ್ವಿತೀಯ ಬಹುಮಾನಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭರತನಾಟ್ಯದಲ್ಲಿ ಸಂಜನಾ ಎಸ್ ಭಟ್ (9ನೇ) ಹಾಗೂ ಜಾನಪದ ನೃತ್ಯ ತಂಡವು ದ್ವಿತೀಯ ಸ್ಥಾನ ಗಳಿಸಿದೆ. ವಿಜೇತ ವಿದ್ಯಾರ್ಥಿಗಳೆಲ್ಲರೂ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟನೆ ತಿಳಿಸಿದೆ.

Also Read  ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ - ಬಹು|ಇಬ್ರಾಹಿಂ ಸ‌ಅದಿ ಮಾಣಿ - ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ

 

error: Content is protected !!
Scroll to Top