(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ರಾಷ್ಟ್ರೀಯ ಸೇವಾ ಯೋಜನೆ, ಕುಂಬ್ರ ಜತ್ತಪ್ಪ ರೈ ಪ್ರತಿಷ್ಠನ, ಕಜೆಮಾರು ಕೆದಂಬಾಡಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಚಾರ ಸಂಕಿರಣ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವು ಸೆಪ್ಟೆಂಬರ್ 20 ರಂದು ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಪ್ರೊಫೆಸರ್ ಪಿ ಎಲ್ ಧರ್ಮ ಅವರ ಅಧ್ಯಕ್ಷತೆಯಲ್ಲಿ, ಮಹಾತ್ಮ ಗಾಂಧೀಜಿಯವರ ಮರಿ ಮಗ ಮತ್ತು ಖ್ಯಾತ ಸಾಮಾಜಿಕ ಚಿಂತಕ ತುಷಾರ್ ಗಾಂಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ. ಹೂಡಿ ಪಿ ಕೃಷ್ಣ ದಿಕ್ಸೂಚಿ ಭಾಷಣ ನಡೆಸಲಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯ ಸಹಕುಲಾಧಿಪತಿ ಡಾ. ಶಾಂತರಾಮ ಶೆಟ್ಟಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಪ್ರಕಟಣೆ ತಿಳಿಸಿದೆ.