ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು ಓರ್ವ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಕುದೂರು ಸಮೀಪದ ಭದ್ರಾಪುರ ಗೇಟ್ ಬಳಿ ನಡೆದಿದೆ.

ಕುಣಿಗಲ್ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆನ್ನಲಾಗಿದೆ. ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!

Join the Group

Join WhatsApp Group