(ನ್ಯೂಸ್ ಕಡಬ) newskadaba.com ಯಾದಗಿರಿ, ಸೆ. 18. ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರ ದಿ.ವಿಶ್ವನಾಥರೆಡ್ಡಿ ಮುದ್ನಾಳ ಅವರ ಪುತ್ರ, ಮಾಜಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ (70) ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡರಾಗಿದ್ದ ಅವರು ಕಳೆದ ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 2018ರಲ್ಲಿ ಬಿಜೆಪಿಯಿಂದ ಯಾದಗಿರಿ ಮತಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮುದ್ನಾಳ ಅವರು 2023ರಲ್ಲಿ ಪರಾಭವಗೊಂಡಿದ್ದರು.
ಮಾಜಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ವಿಧಿವಶ
