(ನ್ಯೂಸ್ ಕಡಬ) newskadaba.com ಬಿಹಾರ, ಸೆ. 18. ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯನ್ನು ಕೊಲೆ ಮಾಡಿ, ಆಕೆಯ ತಲೆಯನ್ನು ಕೈಯಲ್ಲಿ ಹಿಡಿದು ಊರೂರು ಸುತ್ತುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಕುರಿತು ಮಾಧೇಪುರದ ಶ್ರೀನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಖಾರಿಯಾದಿಂದ ವರದಿಯಾಗಿದೆ. ಅರ್ಜುನ್ ಶರ್ಮಾ ಎಂಬಾತ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಚಾಕುವಿನಿಂದ ಕತ್ತು ಸೀಳಿ ಆಕೆಯನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಕಾರ್ಯಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಡಿಎಸ್‌ಪಿ ಮನೋಜ್ ಮೋಹನ್ ತಿಳಿಸಿರುವುದಾಗಿ ವರದಿಯಾಗಿದೆ.
ಪತ್ನಿ ರುಂಡ ಕಡಿದು ಕೈಯಲ್ಲಿ ಹಿಡಿದು ಓಡಾಡುತ್ತಿದ್ದ ಪತಿಯ ಬಂಧನ
