ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಚುನಾವಣೆ- ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಜಮ್ಮು-ಕಾಶ್ಮೀರದಲ್ಲಿ ದಶಕ ನಂತರ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಅಲ್ಲಿನ ನಾಗರಿಕರಿಗೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರಿಗೆ ವಿಶೇಷವಾಗಿ ಮನವಿ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತವು ಪ್ರಾರಂಭವಾಗುತ್ತಿದ್ದಂತೆ, ಇಂದು ಮತದಾನಕ್ಕೆ ಹೋಗುವ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸಲು ನಾನು ಒತ್ತಾಯಿಸುತ್ತೇನೆ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುವರು ತಮ್ಮ ಹಕ್ಕು ಚಲಾಯಿಸಲು ನಾನು ಕರೆ ನೀಡುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Also Read  ಪೂಜೆ ಸೇವೆಗಳು ಆರಂಭ ➤ ಕಟೀಲಿನಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

error: Content is protected !!
Scroll to Top