(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದ ಸರ್ಕಾರ ಈಗ ಮತ್ತೊಮ್ಮೆ ಶಾಕ್ ಕೊಡಲು ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಈಗಾಗಲೇ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಏರಿಕೆ ಮಾಡಿ ಸರ್ಕಾರ ಶಾಕ್ ನೀಡಿತ್ತು. ಇದೀಗ ಮತ್ತೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಇನ್ನೂ ಸರ್ಕಾರದ ನಿರ್ಧಾರಕ್ಕೆ ಬಾರ್ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಪರಿಷ್ಕರಣೆಯಾಗುತ್ತಿದೆ. ರಾಜ್ಯದಲ್ಲಿ ಬಿಯರ್ ಮಾರಾಟ ಹೆಚ್ಚಾಗಿದೆ. ಈ ಮಧ್ಯೆ ಸರ್ಕಾರ ಸುಂಕ ಹೆಚ್ಚಳ ಮಾಡಿದರೆ ಗ್ರಾಹಕರ ಜೊತೆಗೆ ಮಾರಾಟಗಾರರಿಗೂ ಹೊಡೆತ ಬೀಳಲಿದೆ. ಸರ್ಕಾರ ಏರಿಕೆ ಬದಲು ದರ ಇಳಿಕೆ ಬಗ್ಗೆ ಯೋಚನೆ ಮಾಡಿದರೆ ಹೆಚ್ಚು ಮಾರಾಟವಾಗಲಿದೆ. ಈ ಮೂಲಕ ಸರ್ಕಾರ ಮತ್ತು ಮಾಲೀಕರಿಗೆ ಅನೂಕೂಲವಾಗಲಿದೆ ಎನ್ನಲಾಗಿದೆ.