ರಾಜ್ಯದಲ್ಲಿ ಡ್ರಗ್ಸ್ ದಂಧೆ:  ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ‌ ಮಾಡಿದ್ದೇವೆ.ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ‌ ಎಂದರು. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು. ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲಾ  ರೀತಿಯ ನಿಯಂತ್ರಣಕ್ಕೆ‌ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ ಎಂದು ವರದಿಯಾಗಿದೆ.

Also Read  ಮಂಗಳೂರು: ಬೆಳ್ಳಂಬೆಳಗ್ಗೆ ಎಸ್ಡಿಪಿಐ ನಾಯಕನ ಮನೆಮೇಲೆ ಎನ್ಐಎ ದಾಳಿ ➤ ಸ್ಥಳದಲ್ಲಿ ಕಾರ್ಯಕರ್ತರ ಪ್ರತಿಭಟನೆ

 

error: Content is protected !!
Scroll to Top