ನ.20ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ನಿಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇನ್ನೂ ಅಳವಡಿಕೆ ಮಾಡಿಲ್ಲವೇ ಹಾಗಾದರೆ ನಿಮಗಿದೋ ಗುಡ್ ನ್ಯೂಸ್. ಹೈಕೋರ್ಟ್‌ನಿಂದ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವುನ್ನು ನ.20ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲ ಮೋಟಾರು ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (High Security Registration Plate- HSRP)  ಅಳವಡಿಕೆ ಮಾಡಿಸಿಕೊಳ್ಳಲು ನಾಲ್ಕು ಬಾರಿ ಗಡುವು ನೀಡಿತ್ತು. ಕೊನೆಯ ಬಾರಿ ಸೆ.14ರಂದು ಈ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿ ಗಡುವು ನೀಡಿತ್ತು. ಆದರೆ, ಈ ಬಗ್ಗೆ ಸೆ.18ರಂದು ವಿಚಾರಣೆ ಇದ್ದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಯಾವುದೇ ದಂಡವನ್ನು ವಿಧಿಸಿರಲಿಲ್ಲ. ಇಂದು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ ವಕೀಲರ ಮನವಿ ಮೇರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿಯನ್ನು 2024ರ ನವೆಂಬರ್ 20ರ ವರೆಗೆ ಅವಧಿ ವಿಸ್ತಣೆ ಮಾಡಿ ಆದೇಶ ಹೊರಡಿಸಿದೆ.

Also Read  ಐಟಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸದಂತೆ ತಡೆ.!➤ 9 ಡಿಎಂಕೆ ಬೆಂಬಲಿಗರು ಅರೆಸ್ಟ್

error: Content is protected !!
Scroll to Top