ರಣಜಿ ಟ್ರೋಫಿ ಟೂರ್ನಿಗೆ ರಾಹುಲ್ ದ್ರಾವಿಡ್ ಪುತ್ರ ಸಮಿತ್ ಗೆ ಸ್ಥಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ಇದೇ ಅಕ್ಟೋಬರ್ ನಲ್ಲಿ ಆರಂಭವಾಗಲಿರುವ  ರಣಜಿ ಟ್ರೋಫಿ ಟೂರ್ನಿಗೆ ಕರ್ನಾಟಕ ತಂಡದ ಸಂಭವನೀಯ ಆಟಗಾರರ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ.

ಅಕ್ಟೋಬರ್ 11 ರಿಂದ ಶುರುವಾಗಲಿರುವ ರಣಜಿ ಟ್ರೋಫಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, 37 ಸದಸ್ಯರನ್ನು ಒಳಗೊಂಡಿರುವ ಈ ಪಟ್ಟಿಯಲ್ಲಿ ಸಮಿತ್ ದ್ರಾವಿಡ್ ಕೂಡ ಕಾಣಿಸಿಕೊಂಡಿರುವುದು ವಿಶೇಷ. ಬಿಸಿಸಿಐ ವಯೋಮಿತಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಸಮಿತ್ ದ್ರಾವಿಡ್, ಸಮರ್ಥ್ ನಾಗರಾಜ್, ಸ್ಮರಣ್ ಆರ್, ಕೃತಿಕ್ ಕೃಷ್ಣ, ಜಾಸ್ಪರ್ ಇ.ಜೆ ಸೇರಿದಂತೆ ಹಲವು ಯುವ ಆಟಗಾರರಿಗೆ ಈ ಬಾರಿ ಮಣೆ ಹಾಕಲಾಗಿದೆ.

Also Read  ಮತ ಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು

 

error: Content is protected !!
Scroll to Top