(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಜಿಲ್ಲಾ ಮಟ್ಟದ ಐ.ಇ.ಸಿ ಚಟುವಟಿಕೆಗಳಡಿ ವಿವಿಧ ವರ್ಗದ ಕಾರ್ಮಿಕರಿಗೆ, ಸಂಘ ಸಂಸ್ಥೆಗಳಿಗೆ ಹಾಗೂ ಮಾಲೀಕರಿಗೆ ಕಾರ್ಮಿಕ ಕಾನೂನುಗಳ ಬಗ್ಗೆ ಮತ್ತು ಇಲಾಖೆಯ ಯೋಜನೆಗಳ ಸೆಪ್ಟೆಂಬರ್ 22ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಕಛೇರಿ, ನೇತ್ರಾವತಿ ಸಭಾಂಗಣದಲ್ಲಿ ಒಂದು ದಿನದ ಕಾನೂನು ಅರಿವು ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ವಿಭಾಗ, ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 22ರಂದು ಕಾನೂನು ಅರಿವು ಕಾರ್ಯಾಗಾರ
