ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಬೆಂಗಳೂರಿನಲ್ಲಿ ನಡೆದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಆರೋಪಿಸಿದ್ದರು. ನಾಗಮಂಗಲ ಟೌನ್​ ಠಾಣೆಯಲ್ಲಿ ಅರ್ ಅಶೋಕ್ ಹಾಗೂ ಶೋಭಾ‌ ಕರಂದ್ಲಾಜೆ ವಿರುದ್ಧ ಬಿಎನ್ಎಸ್ ಸೆಕ್ಷನ್ 192ರ ಅಡಿ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

Also Read  ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್‌ ದೃಢ

 

 

error: Content is protected !!
Scroll to Top