ಕಾಮಗಾರಿ ಹಿನ್ನೆಲೆ- ರೈಲು ಸೇವೆಯಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಪಾಲಕ್ಕಾಡ್‌ ರೈಲ್ವೇ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾದ ಹಿನ್ನೆಲೆ ಹಲವು ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ.


ಸೆ. 19ರಂದು ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ನಂ. 22637 ವೆಸ್ಟ್‌ ಕೋಸ್ಟ್‌ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು 2 ಗಂಟೆ 10 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ. ಆದೇ ದಿನ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಸಂಖ್ಯೆ 12685 ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು 40 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ.

ಸೆ.19ರಂದು ತಿರುವನಂತಪುರಂ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ನಂ. 16604 ಮಾವೇಲಿ ಎಕ್ಸ್‌ಪ್ರೆಸ್‌ ರೈಲು 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ. ಸೆ. 20ರಂದು ಡಾ. ಎಂಜಿಆರ್‌ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಸಂಖ್ಯೆ 22637 ವೆಸ್ಟ್‌ ಕೋಸ್ಟ್‌ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಸೇವೆ 1 ಗಂಟೆ 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ.

Also Read  ಜೈಲಿನಿಂದ ತಪ್ಪಿಸಲೆತ್ನಿಸಿದ 129 ಕೈದಿಗಳು ಮೃತ್ಯು..!

ಸೆ. 21ರಂದು ಡಾ. ಎಂಜಿಆರ್‌ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಸಂಖ್ಯೆ 22637 ವೆಸ್ಟ್‌ ಕೋಸ್ಟ್‌ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಸೇವೆ 1 ಗಂಟೆ ಕಾಲ ವ್ಯತ್ಯಯವಾಗಲಿದೆ. ಸೆ. 27ರಂದು ಮಂಗಳೂರು ಸೆಂಟ್ರಲ್‌ನಿಂದ ಡಾ| ಎಂಜಿಆರ್‌ ಚೆನ್ನೈ ಸೆಂಟ್ರಲ್‌ಗೆ ತೆರಳುವ ನಂ. 22638 ವೆಸ್ಟ್‌ ಕೋಸ್ಟ್‌ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಸೇವೆ 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ ಎಂದು ರೈಲ್ವೇ ಇಲಾಖೆ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top