(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಜ್ಯದ ಎರಡನೇ ಅತಿ ಎತ್ತರದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ಧ್ವಜಸ್ತಂಭದ ಉದ್ಘಾಟನಾ ಸಮಾರಂಭವು ನಗರದ ಕದ್ರಿ ಪಾರ್ಕ್‌ನಲ್ಲಿ ಜರಗಿತು.
ಸಂಸದ ಕ್ಯಾ| ಬ್ರಿಜೇಶ್ ಚೌಟ ಮಾತನಾಡಿ, ಕೇಂದ್ರ ಸರಕಾರದ ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ ರಾಷ್ಟ್ರಧ್ವಜ ಸ್ತಂಭ ನಿರ್ಮಾಣದ ಮಹತ್ತರ ಕಾರ್ಯ ನಡೆದಿದ್ದು, ಇದರೊಂದಿಗೆ ಭಾರತೀಯತೆಯ ಗರ್ವ ಮತ್ತಷ್ಟು ಇಮ್ಮಡಿಗೊಳಿಸಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರೀಯ ಭಾವನೆ, ಚಿಂತನೆ ಮತ್ತಷ್ಟು ಹೆಚ್ಚಾಗಿದೆ. ರಾಷ್ಟ್ರಧ್ವಜ ನಮ್ಮ ಸ್ವಾಭಿಮಾನದ ಸಂಕೇತ ಎಂದು ಹೇಳಿದರು. ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಸಾಕಾರ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ರಾಜ್ಯದಲ್ಲಿ ಬೆಳಗಾವಿ ಹೊರತುಪಡಿಸಿ (110 ಮೀ.) ಅತೀ ಎತ್ತರದ ರಾಷ್ಟ್ರ ಧ್ವಜಸ್ತಂಭ ಕದ್ರಿ ಪಾರ್ಕ್‌ನಲ್ಲಿ ನಿರ್ಮಾಣಗೊಂಡಿದೆ. ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಸುಮಾರು 75 ಲ.ರೂ. ವೆಚ್ಚದಲ್ಲಿ 75 ಮೀ. ಎತ್ತರದ ರಾಷ್ಟ್ರಧ್ವಜಸ್ತಂಭ ಇದಾಗಿದೆ. ಧ್ವಜಸ್ತಂಭ ಕಟ್ಟೆ, ಬೆಳಕಿನ ವ್ಯವಸ್ಥೆ ಹೊಂದಿರಲಿದೆ ಎಂದು ಹೇಳಿದರು.