ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ರಾಮನಗರ, ಸೆ. 19. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಬುಧವಾರದಂದು 40 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದು, ಮುನಿರತ್ನ ಹಾಗೂ ಅವರ ಗನ್‌ಮ್ಯಾನ್‌ ವಿಜಯಕುಮಾರ್, ಸುಧಾಕರ, ಕಿರಣ್‌ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

Scroll to Top