ಸೈನಿಕ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ರಕ್ಷಣಾ ಸಚಿವಾಲಯದೊಂದಿಗೆ ಸಂಯೋಜಿತವಾಗಿರುವ ನಗರದ ಸೈನಿಕ ಶಾಲೆಯೊಂದಕ್ಕೆ ಬುಧವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತದ ನಂತರ ಶಾಲಾ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಲಾಯಿತು.

ಮಧ್ಯಾಹ್ನ 12.30 ರ ಸುಮಾರಿಗೆ ಶಾಲಾ ಆವರಣದಲ್ಲಿ ಸ್ಪೋಟಕ ಇಡಲಾಗಿದೆ ಎಂದು ಶಾಲೆಗೆ ಅನಾಮಧೇಯ ಇಮೇಲ್ ಬಂದಿದೆ. ಇದರಿಂದ ಆತಂಕಕ್ಕೀಡಾದ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ವಾನದಳದೊಂದಿಗೆ ಸ್ಥಳಕ್ಕೆ ಆಗಮಿಸಿದ ಪೊಲೀಸ್, ಬಾಂಬ್ ಪತ್ತೆ ಮತ್ತು ನಿಷ್ಕ್ರೀಯ ದಳ ಶಾಲಾ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಲಾಯಿತು. ಈ ಸಂಬಂಧ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Also Read  ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಸೂಚನೆ       ➤ ಈ ನಿಯಮ ಪಾಲನೆ ಕಡ್ಡಾಯ

                                                                      

 

 

error: Content is protected !!
Scroll to Top