ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ: ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ ಸಹೋದರರು..!

(ನ್ಯೂಸ್ ಕಡಬ) newskadaba.com ತುಮಕೂರು, ಸೆ. 19. ಆಸ್ಪತ್ರೆಯ ಅಧಿಕಾರಿಗಳು ಆಂಬ್ಯುಲೆನ್ಸ್ ನಿರಾಕರಿಸಿದ ನಂತರ ಇಬ್ಬರು ಸಹೋದರರು ತಮ್ಮ ಮೃತ ತಂದೆಯ ಶವವನ್ನು ಮೋಟಾರ್ ಬೈಕ್ ನಲ್ಲಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈಎನ್ ಹೊಸಕೋಟೆ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಸಹೋದರರಾದ ಚಂದ್ರಣ್ಣ ಮತ್ತು ಗೋಪಾಲಪ್ಪ ಅವರು ಶವವನ್ನು ಆಸ್ಪತ್ರೆಯಿಂದ ಸುಮಾರು 3-4 ಕಿಮೀ ದೂರದಲ್ಲಿರುವ ದಳವಾಯಿಹಳ್ಳಿ ಗ್ರಾಮಕ್ಕೆ ಸಾಗಿಸಿದ್ದಾರೆ. ಅಸ್ವಸ್ಥರಾಗಿದ್ದ ತಮ್ಮ ತಂದೆ ಗುಡುಗುಳ್ಳ ಹೊನ್ನೂರಪ್ಪ (80) ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತಂದರು, ಆದರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಮೃತದೇಹವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ಅವರು ಆಂಬ್ಯುಲೆನ್ಸ್ ಸೇವೆಯನ್ನು ಕೋರಿದ್ದರು, ಆದರೆ ಅಧಿಕಾರಿಗಳು ನಿರಾಕರಿಸಿದರು. ಪಾವಗಡ ಕಾಂಗ್ರೆಸ್ ಶಾಸಕ ಎಚ್.ವಿ.ವೆಂಕಟೇಶ್ ಮಧ್ಯ ಪ್ರವೇಶಿಸಿದರೂ ಸಮಸ್ಯೆ ಇತ್ಯರ್ಥವಾಗಿಲ್ಲ ಎಂದು ಮೂಲಗಳು ತಿಳಿಸಿವೆ ಎನ್ನಲಾಗಿದೆ.

Also Read  ಭದ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಮಿತಿ ರಚನೆ- ಡಾ.ಶರಣ್ ಪ್ರಕಾಶ ಪಾಟೀಲ್‌

                                                                                                       

 

 

error: Content is protected !!
Scroll to Top