ಮನಪಾ ಚುನಾವಣೆ- ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್ ಆಯ್ಕೆಯಾಗಿದ್ದಾರೆ.


ಮೇಯರ್ ಚುನಾವಣೆಗೆ “ಎಸ್ ಸಿ” ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದಿದ್ದರಿಂದ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯಿತು.

Scroll to Top