ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಕರ್ನಾಟಕ ಸರಕಾರ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ಕಡಬ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಸೈಂಟ್ ಜೋಕಿಮ್ಸ್ ಕ್ರೀಡಾಂಗಣದಲ್ಲಿ ನೆರವೇರಿತು.


ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಪ್ರಿಂಗ್ಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ನಿವಿನ್ ಕುರಿಯಕೋಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಗ್ರಾಮೀಣ ಕ್ರೀಡೆಯಾಗಿರುವ ಕಬಡ್ಡಿ ಇಂದು ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆಯಲು ಸಾಧ್ಯವಾಗಿದೆ. ಇಂತಹ ರಚನಾತ್ಮಕ ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ನಿರಂತರವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂದನೀಯ ಪ್ರಕಾಶ್ ಪಾವ್ಲ್ ಡಿ’ಸೋಜ ಅವರು ಶಿಕ್ಷಣ ಇಲಾಖೆಯ ನಿರ್ದೇಶನದಲ್ಲಿ ನಡೆಯುವ ಇಂತಹ ದೇಶಿಯ ಕ್ರೀಡೆಗಳು ಉತ್ತುಂಗಕ್ಕೇರಲು ಸರ್ವರೂ ಶ್ರಮಿಸಬೇಕೆಂದು ಹೇಳಿ ಶುಭ ಹಾರೈಸಿದರು.

Also Read  ಮಂಗಳೂರು: ವ್ಯಕ್ತಿಗೆ ಕರೆಮಾಡಿ ಜೀವಬೆದರಿಕೆ ➤ ದೂರು ದಾಖಲು


ಕಡಬ ತಾಲೂಕು ಕ್ರೀಡಾ ಸಂಯೋಜಕರಾದ ರಾಧಾಕೃಷ್ಣ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಜೆಸಿಂತಾ ವೇಗಸ್, ಕಾಲೇಜು ರಕ್ಷಕ-ಶಿಕ್ಷಕ ಸಮಿತಿ ಉಪಾಧ್ಯಕ್ಷರಾದ ಬಾಲಕೃಷ್ಣ ಬಿ, ನಿಕಟಪೂರ್ವ ಉಪಾಧ್ಯಕ್ಷರಾದ ಸತೀಶ್ ನಾಯ್ಕ್, ವಿದ್ಯಾ ಸಂಸ್ಥೆಗಳ ಮುಖ್ಯಸ್ಥರುಗಳಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಸಿಸ್ಟರ್ ಹಿಲ್ಡಾ ರೋಡ್ರಿಗಸ್, ಶ್ರೀಲತಾ ಕೆ. ಹಾಗೂ ದಕ್ಷಾ ಪ್ರಸಾದ್ ಉಪಸ್ಥಿತರಿದ್ದರು. ಸೈಂಟ್ ಜೋಕಿಮ್ಸ್ ಕಾಲೇಜು ಪ್ರಾಂಶುಪಾಲರಾದ ಕಿರಣ್ ಕುಮಾರ್ ಸ್ವಾಗತಿಸಿ, ಉಪನ್ಯಾಸಕರಾದ ಮ್ಯಾಥ್ಯೂ ಇ.ಜೆ ವಂದಿಸಿದರು. ಉಪನ್ಯಾಸಕಿ ಸುಜಾ ವಿ.ಜೆ. ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top