ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19.  ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಶೇ.40 ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ ಎನ್ನಲಾಗಿದೆ.

Also Read  ಬಾಟಲಿಯ ಮುಚ್ಚಲ ತೆಗೆಯುವಾಗ ಗಂಟಲಿಗೆ ಸಿಲುಕಿ ಬಾಲಕ ಮೃತ್ಯು.!

error: Content is protected !!
Scroll to Top