ಇನ್ನುಮುಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಇನ್ನುಮುಂದೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಹೀಗಾಗಿ ಪ್ರತೀ ಜಿಲ್ಲೆಯ ಒಂದೊಂದು ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿ ಹಾಜರಾತಿ ಪಡೆಯಲಾಗಿದೆ. ಈ ವೇಳೆ ಯಾವುದೇ ತಾಂತ್ರಿಕ ದೋಷಗಳಿಲ್ಲದೇ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪಡೆಯುವ ಪ್ರಯೋಗ ಯಶಸ್ವಿಯಾಗಿರುವ ಹಿನ್ನೆಲೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯು ಯೋಜನಾ ವರದಿ ಸಿದ್ದಪಡಿಸಿದೆ. ಅದರಂತೆ ಮುಂದಿನ ಹಂತದ ಸಿದ್ಧತೆಗಳನ್ನು ಪೂರ್ಣಗೊಳಿಸಿ ಎಲ್ಲಾ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದೆನ್ನಲಾಗಿದೆ.

error: Content is protected !!
Scroll to Top