ಯುವತಿ ನಾಪತ್ತೆ..!

(ನ್ಯೂಸ್ ಕಡಬ) newskadaba.com ಸುರತ್ಕಲ್, ಸೆ. 20. ಸ್ನೇಹಿತೆಯೊಂದಿಗೆ ಮಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಯುವತಿಯೋರ್ವಳು ಕಾಣೆಯಾಗಿರುವ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಪೇಟೆಯಲ್ಲಿ ವಾಸವಿದ್ದ ಹನುಮಂತ ಹಾಗೂ ಲಕ್ಷ್ಮವ್ವ ಎಂಬವರ ಮಗಳು ಕುಮಾರಿ ಸುನೀತಾ (19) ಕಾಣೆಯಾದ ಯುವತಿ ಎಂದು ತಿಳಿದು ಬಂದಿದೆ.


ಕಾಣೆಯಾಗಿರುವ ಸುನೀತಾ ಸಾಧಾರಣ ಶರೀರ ಹೊಂದಿದ್ದು, 4.5 ಅಡಿ ಎತ್ತರ ಇದ್ದಾರೆ. ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಭಾಷೆ ಬಲ್ಲವರಾಗಿದ್ದಾರೆ. ಇವರು ಪತ್ತೆಯಾದಲ್ಲಿ ಸುರತ್ಕಲ್‌ ಪೊಲೀಸ್‌ ಠಾಣೆ ಅಥವಾ ಕಂಟ್ರೋಲ್‌ ರೂಮ್‌ ಗೆ ಮಾಹಿತಿ ನೀಡುವಂತೆ ಸುರತ್ಕಲ್‌ ಪೊಲೀಸರು ತಿಳಿಸಿದ್ದಾರೆ.

Also Read  ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ- 2024

 

error: Content is protected !!
Scroll to Top