ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಶಾಲಾ ವಾಹನವೊಂದು ಬೈಕ್ ನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ನಡೆದಿದೆ.

ಜೊತೆಗೆ ವಾಹನದಲ್ಲಿದ್ದ ಇಬ್ಬರು ಮಹಿಳೆಯರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದೆನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಮುರಿದುಬಿದ್ದಿದೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top