ಬೈಕ್ ಅಪಘಾತ: ಯುವಕ ಮೃತ್ಯು..!



(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಎಂದು ಗುರುತಿಸಲಾಗಿದೆ.







ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ ಅಪಘಾತ ನಡೆದಿದೆ.  ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ವೆಳ್ಳರಿಕುಂಡು ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.






 

error: Content is protected !!
Scroll to Top