(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿ ಪೋಷಣ ಮಾಸಾಚರಣೆ ಕಾರ್ಯಕ್ರಮವು ಇಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾಭವನದಲ್ಲಿ ನಡೆಯಲಿದೆ. ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಇಂದು ಪೋಷಣ ಮಾಸಾಚರಣೆ ಕಾರ್ಯಕ್ರಮ
