ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

crime, arrest, suspected

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಕುರಿತು ವರದಿಯಾಗಿದೆ.


ದೂರಿನ ಪ್ರಕಾರ, ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೋರ್ವರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ಒಟ್ಟು 9,77,154 ರೂ. ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ರವರಲ್ಲಿ ವಿಚಾರಿಸಿದಾಗ ಬಿಲ್ಲು ಪಾಸ್ ಮಾಡಲು ತನಗೆ ರೂ 37,000 ಲಂಚವನ್ನು ನೀಡುವಂತೆ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಯವರಿಗೆ ರೂ. 15,000 ಲಂಚವನ್ನು ನೀಡಬೇಕೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೂನಿಯರ್ ಇಂಜಿನಿಯರ್ ನಾಗರಾಜುರವರು ಮುಂಚಿತವಾಗಿ ರೂ 7,000/- ಹಣವನ್ನು ದೂರುದಾರರಿಂದ ಪಡೆದುಕೊಂಡಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.

Also Read  ನಾಳೆ (ಜ.16) ಕೊರೋನಾ ಲಸಿಕೆ ವಿತರಣೆಗೆ ಚಾಲನೆ

ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ರವರು ರೂ. 30,000 ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿಯವರು ರೂ 15,000 ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top