ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಬಂಟ್ವಾಳ ತಾಲೂಕಿನ ಮಿತ್ತೂರು ಮೂಲದ ತಿಮ್ಮಪ್ಪ ನಾಯ್ಕ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಅವರನ್ನು ಸುಳ್ಯಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿತ್ತು.


ಸುಳ್ಯ ಪ್ರಭಾರ ವೃತ್ತ ನಿರೀಕ್ಷಕರಾಗಿದ್ದ ಪುತ್ತೂರು ನಗರ ವೃತ್ತ ನಿರೀಕ್ಷಕ ಜಾನ್ಸನ್ ಅವರಿಂದ ತಿಮ್ಮಪ್ಪ ನಾಯ್ಕ ಅವರು ಅಧಿಕಾರ ಸ್ವೀಕರಿಸಿದ್ದಾರೆ. ತಿಮ್ಮಪ್ಪ ನಾಯ್ಕ ಅವರು ಆರಕ್ಷಕ ಉಪನಿರೀಕ್ಷಕರಾಗಿ ಮೈಸೂರಿನಲ್ಲಿ ತರಬೇತಿ ಪಡೆದು ಚಿಕ್ಕಮಗಳೂರಿನಲ್ಲಿ ಪ್ರೊಬೇಷನರಿ ಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿ ಬಳಿಕ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರ, ಭಟ್ಕಳ ಗ್ರಾಮಾಂತರ, ಹಳಿಯಾಳ, ಕಾರವಾರದ ಕೈಗಾ, ಕಾರವಾರ ಟೌನ್, ಉಪ್ಪಿನಂಗಡಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2016ರಲ್ಲಿ ವೃತ್ತ ನಿರೀಕ್ಷಕರಾಗಿ ಭಡ್ತಿ ಹೊಂದಿ ಎರಡು ವರ್ಷಗಳ ಕಾಲ ನಕ್ಸಲ್ ನಿಗ್ರಹ ಪಡೆ(ಎಎನ್ಎಎಫ್)ಯಲ್ಲಿ ಸಿಐ ಆಗಿದ್ದರು. ಪುತ್ತೂರು ನಗರ, ಪುತ್ತೂರು ಮಹಿಳಾ ಠಾಣೆ, ಹೊನ್ನಾವರಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

error: Content is protected !!
Scroll to Top