(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 20. ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನೇ ಕಿಡಿಗೇಡಿಗಳು ಹ್ಯಾಕ್ ಮಾಡಿರುವ ಕುರಿತು ವರದಿಯಾಗಿದೆ. ಕಿಡಿಗೇಡಿಗಳು ಹ್ಯಾಕ್ ಮಾಡಿರುವುದಲ್ಲದೇ ಅದರಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು ಪೋಸ್ಟ್ ಮಾಡಿರುವುದಾಗಿ ತಿಳಿದಿಬಂದಿದೆ.
ವರದಿಯ ಪ್ರಕಾರ, ಯೂಟ್ಯೂಬ್ ಚಾನೆಲ್ ಮೂಲಕ ಸುಪ್ರೀಂ ಕೋರ್ಟ್, ವಿಚಾರಣೆಗಳ ನೇರ ಪ್ರಸಾರ ಮಾಡುತ್ತಿತ್ತು. ಇನ್ನು ವಿಚಾರಣೆಗಳ ವಿಡಿಯೋಗಳು ಚಾನೆಲ್‌ನಲ್ಲಿ ಲಭ್ಯವಿದೆ. ಇತ್ತೀಚೆಗೆ ರಿಪ್ಪಲ್ ಲ್ಯಾಬ್ಸ್ ವಿಡಿಯೋಗಳನ್ನು ಎಲ್ಲೆಡೆ ಪೋಸ್ಟ್ ಮಾಡುತ್ತಿರುವ ಕುರಿತು ಇತ್ತೀಚೆಗೆ ಯೂಟ್ಯೂಬ್ ವಿರುದ್ಧವೇ ಕಾನೂನು ಹೋರಾಟ ಆರಂಭಿಸಲಾಗಿತ್ತು. ಹಲವು ಹ್ಯಾಕರ್ಸ್ ಗಳು ತಮ್ಮ ಚಾನೆಲ್ ವಿಡಿಯೋಗಳನ್ನು ಬೇರೆ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡುತ್ತಿರುವ ಕುರಿತು ದೂರು ನೀಡಲಾಗಿದೆ ಎಂದು ವರದಿಯಾಗಿದೆ.