ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 20. ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಆಹ್ವಾನಿಸಲಾಗಿದ್ದು, ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ದೊರೆಯಲಿದ್ದು, ಈಗಾಗಲೆ ಗಜಪಡೆ ತಾಲೀಮು ಆರಂಭವಾಗಿದೆ. ಇನ್ನು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ‘ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಅವರು, ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

Also Read  ಎರಡು ತಿಂಗಳ ಬಳಿಕ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯ ಪುನರ್ ಆರಂಭ

 

error: Content is protected !!
Scroll to Top