ಕುಂಟುತ್ತಾ ಸಾಗುತ್ತಿರುವ ಗೋಳಿತ್ತಡಿ – ನೆಲ್ಯೊಟ್ಟು ರಸ್ತೆಯ ಮರು ಡಾಮರೀಕರಣ ಕಾಮಗಾರಿ ► ಹರಡಿಕೊಂಡಿರುವ ಜಲ್ಲಿಕಲ್ಲುಗಳನ್ನು ತಪ್ಪಿಸಲು ಹೋಗಿ ಚರಂಡಿಗಿಳಿದ ಕಾರು

(ನ್ಯೂಸ್ ಕಡಬ) newskadaba.com ಕಡಬ, ಮಾ.06. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿಯಿಂದ ನೆಲ್ಯೊಟ್ಟು ಸಂಪರ್ಕ ರಸ್ತೆಯ ಮರು ಡಾಮರೀಕರಣ ನಡೆಯುತ್ತಿದ್ದು, ಕಾಮಗಾರಿಯು ಕುಂಟುತ್ತಾ ಸಾಗುತ್ತಿರುವುದರಿಂದ ಅಪಾಯವನ್ನು ಆಹ್ವಾನಿಸುತ್ತಿದೆ.

ಮಂಗಳವಾರದಂದು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಓಮ್ನಿ ಕಾರೊಂದು ಚರಂಡಿಗೆ ಬಿದ್ದಿದ್ದು, ಕಾರಿನೊಳಗಿದ್ದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಮಗಾರಿ ಡಿಸೆಂಬರ್ ನಲ್ಲಿ ಆರಂಭಗೊಂಡ ಬಳಿಕ ನಿಧಾನಗತಿಯಲ್ಲಿ ಸಾಗುತ್ತಿದ್ದು, ಜಲ್ಲಿಕಲ್ಲು ಹರವಿಕೊಂಡು ರಸ್ತೆಯಲ್ಲಿ ಸಂಚರಿಸುವುದೇ ದುಸ್ತರವಾಗಿದೆ. ಜಲ್ಲಿಕಲ್ಲಿನಿಂದ ವಾಹನಗಳಿಗೆ ಹಾನಿಯಾಗುವುದನ್ನು ತಪ್ಪಿಸಲು ಹೋಗಿ ಕಾರು ಚರಂಡಿವೆ ಇಳಿದಿದೆ. ನಿಧಾನಗತಿಯ ಕಾಮಗಾರಿಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ‌.

Also Read  ಇಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರ ಪ್ರವಾಸ

error: Content is protected !!
Scroll to Top