ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಇಲ್ಲಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಡಬದ ಉದ್ಯಮಿ ಶ್ರೀ ಮಹೇಂದ್ರ ಚೌಧರಿಯವರು ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಕನ್ನಡ, ಆಂಗ್ಲ ಭಾಷೆಯ ಜೊತೆಯಲ್ಲಿ ನಾವು ನಮ್ಮ ರಾಷ್ಟ್ರಭಾಷೆಯಾದ ಹಿಂದಿಯನ್ನು ಅಭ್ಯಾಸ ಮಾಡಬೇಕು. ಹಿಂದಿ ಭಾಷೆಯನ್ನು ಎಲ್ಲರೂ ಮಾತನಾಡುವಂತಾಗಬೇಕು ಎಂದರು. ಇನ್ನೋರ್ವ ಅತಿಥಿ ಶಾಲಾ ಆಡಳಿತ ಮಂಡಳಿಯ ಸದಸ್ಯೆಯಾದ ಶ್ರೀಮತಿ ಪ್ರಮೀಳಾ ಲೋಕೇಶ್ ಅವರು ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಸಹಕರಿಸಿದ ಅನೇಕ ಮಹಾನ್ ವ್ಯಕ್ತಿಗಳನ್ನು ನೆನಪಿಸಿಕೊಂಡರು. ಅಧ್ಯಕ್ಷರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಭಾಷೆ ಕೇವಲ ಅಂಕಕ್ಕೆ ಸೀಮಿತವಾದುದಲ್ಲ. ಅದರಲ್ಲಿ ಪ್ರಬುದ್ಧತೆಯನ್ನು ಪಡೆಯಬೇಕು ಎಂದರು.

Also Read  ಉಳ್ಳಾಲ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಆರೋಪಿ ಪರಾರಿ

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಶ್ರೀ ವೆಂಕಟ್ರಮಣ ರಾವ್ ಮಂಕುಡೆ, ಮುಖ್ಯ ಶಿಕ್ಷಕಿ ಕುಮಾರಿ. ಶ್ವೇತಾ, ಹಿಂದಿ ಶಿಕ್ಷಕಿ ಶ್ರೀಮತಿ ಮಮತಾ ಎಸ್. ರವರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಾಲಾ 8ನೇ ತರಗತಿ ವಿದ್ಯಾರ್ಥಿ ಯೋಗೇಂದ್ರ ಬಿ.ಎಸ್. ಸ್ವಾಗತಿಸಿ, 9ನೇ ತರಗತಿ ವಿದ್ಯಾರ್ಥಿನಿ ಮನಸ್ವಿ ವಂದಿಸಿದರು. 9ನೇ ತರಗತಿ ವಿದ್ಯಾರ್ಥಿ ಸುಮಂತ್ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

error: Content is protected !!
Scroll to Top