ಸೆ.23ರಂದು ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯತ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ವಿಟ್ಲ ಪಟ್ಟಣ ಪಂಚಾಯತ್ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 23ರಂದು ಬೆಳಿಗ್ಗೆ 09 ಗಂಟೆಗೆ ವಿಠಲ ಪದವಿ ಪೂರ್ವ ಕಾಲೇಜು ಮೈದಾನ, ವಿಟ್ಲದಲ್ಲಿ ನಡೆಯಲಿದೆ.

ತಾಲೂಕು ಮಟ್ಟದಲ್ಲಿ ಸಂಘಟಿಸಲಾಗುವ ಕ್ರೀಡೆಗಳ ವಿವರ

ಪುರುಷರು: 1) ಅಥ್ಲೆಟಿಕ್ಸ್- 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ. ಓಟ, 10000 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ, 2) ವಾಲಿಬಾಲ್, 3) ಫುಟ್‍ಬಾಲ್, 4) ಖೋ-ಖೋ, 5) ಕಬಡ್ಡಿ, 6) ಥ್ರೋಬಾಲ್ ಮತ್ತು 7) ಯೋಗ

Also Read  ಕಂದಾಯ ಸಚಿವರ ಪ್ರವಾಸ

ಮಹಿಳೆಯರು: 1) ಅಥ್ಲೆಟಿಕ್ಸ್- 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ, 2) ವಾಲಿಬಾಲ್, 3) ಫುಟ್‍ಬಾಲ್, 4) ಖೋ-ಖೋ, 5) ಕಬಡ್ಡಿ, 6) ಥ್ರೋಬಾಲ್ ಮತ್ತು 7) ಯೋಗ


ಷರತ್ತುಗಳು: ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಸ್ಪರ್ಧಿಸಲು ಅರ್ಹರಿರುತ್ತಾರೆ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ತಾಲೂಕಿನಲ್ಲಿ ಭಾಗವಹಿಸಿದ ನಂತರ ಬೇರೆ ತಾಲೂಕಿನಿಂದ ಭಾಗವಹಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ಬಂಟ್ವಾಳ ತಾಲೂಕು ದಸರಾ ಕ್ರೀಡಾಕೂಟದ ನೋಡಲ್ ಅಧಿಕಾರಿಯಾದ ಶ್ರೀ ರಾಜೇಂದ್ರ ರೈ, ಅಧ್ಯಕ್ಷರು, ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಬಂಟ್ವಾಳ ತಾಲೂಕು (ಮೊಬೈಲ್ ಸಂಖ್ಯೆ- 9449859810, 6361651059) ಇವರನ್ನು  ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,  ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top