ಹೃದಯಘಾತದಿಂದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಸೆ.21. ಎಂಟನೇ ತರಗತಿ ಓದುತ್ತಿದ್ದ ಸಚಿನ್(11)  ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ.

ಶುಕ್ರವಾರ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಮೃತಪಟ್ಟಿದ್ದ ಎಂದು ವೈದ್ಯರು ಪೋಷಕರು ತಿಳಿಸಿದ್ದಾರೆ.

Also Read  ಮಧ್ಯರಾತ್ರಿಯಿಂದ ಕರೆನೀಡಿದ್ದ ಮುಷ್ಕರವನ್ನು ಕೈಬಿಟ್ಟ ಲಾರಿ ಮಾಲಕರು

 

error: Content is protected !!
Scroll to Top