ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸುವಂತೆ ಒಕ್ಕಲಿಗ ನಾಯಕರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಒಕ್ಕಲಿಗ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದ್ದಾರೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ನೇತೃತ್ವದಲ್ಲಿ ತೆರಳಿದ್ದ ನಿಯೋಗ, ಮುನಿರತ್ನ ವಿರುದ್ಧ ಕಮಿಷನ್‌ ದಂಧೆ, ಅತ್ಯಾಚಾರ, ಹನಿಟ್ರ್ಯಾಪ್‌, ಎಚ್‌ಐವಿ ಹರಡುವಿಕೆ ಸೇರಿದಂತೆ ವಿವಿಧ ಆರೋಪಗಳು ಇವೆ. ಹಾಗಾಗಿ, ಎಲ್ಲಾ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಮನವಿ ಮಾಡಿಕೊಂಡರು. ಈ ಮನವಿಗೆ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುನಿರತ್ನ ಅವರ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚನೆಗೆ ಮುಂದಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Also Read  ಗೃಹಜ್ಯೋತಿಗೆ ಸಲ್ಲಿಸಿದ್ದ ಬಹುತೇಕ ಅರ್ಜಿಗಳು ಕ್ಯಾನ್ಸಲ್..! - ತಾಂತ್ರಿಕ ದೋಷ ಹಿನ್ನೆಲೆ

 

 

error: Content is protected !!
Scroll to Top