ಬೆಳ್ತಂಗಡಿ: ಸೆ.22ರಂದು ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.21. ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು , ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22 ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಗುರುವಾಯನಕೆರೆಯ ವಿದ್ವತ್ ಪಿ ಯು ಕಾಲೇಜಿನಲ್ಲಿ ನಡೆಯಲಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು ಹಾಗೂ ವಿಷಯ ತಜ್ಞರಾದ ಶ್ರೀ ಪ್ರತಾಪ್ ದೊಡ್ಡಮನೆಯವರು ಮಾಹಿತಿ ನೀಡಲಿದ್ದಾರೆ. ಈ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿ ಹಾಗೂ ಅವರ ಪೋಷಕರು ಇದರಲ್ಲಿ ಭಾಗಿಯಾಗಿ ಇದರ ಸಂಪೂರ್ಣ ಪ್ರಯೋಜನ ಪಡೆಯಬಹುದು ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಶ್ರೀ ಕಾಶಿನಾಥ್ ಎಂ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

error: Content is protected !!

Join the Group

Join WhatsApp Group