ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಇಂದು ಆದೇಶ ನೀಡಿದೆ.

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ. ಇಂದು ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

 

 

Scroll to Top