ಸೆಕ್ಯೂರಿಟಿ ಸಿಬ್ಬಂದಿ ಹಲ್ಲೆ: ಯುವಕ ಅರೆಸ್ಟ್..!



(ನ್ಯೂಸ್ ಕಡಬ) newskadaba.com ರಾಮನಗರ, ಸೆ.21. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್​ಮೆಂಟ್​ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.







ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್ ವರ್ತ್‌ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಸಿಬ್ಬಂದಿಯನ್ನು ಪುನೀತ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪುನೀತ್ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎನ್‌.ಸಿ ಮಾಡಿಕೊಳ್ಳಲಾಗಿದೆ. ಅಲ್ಲದೆ, ಯುವಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ವರದಿ ತಿಳಿದುಬಂದಿದೆ.






 

error: Content is protected !!
Scroll to Top