ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ – News Kadaba

ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ತಾಲೂಕಿನ ರೆಂಜಿಲಾಡಿ ಸ್ಯಾಂತೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಗೈಡ್ಸ್ ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಭರತ್ ರಾಜ್ ಕೆ. ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಭಾರತ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧನೆ ಅನ್ನುವ ಬೀಜ ಯಾರ ಬಳಿಯಾದರೂ ಮೊಳಕೆ ಒಡೆಯಲು ಸಾಧ್ಯ. ಶ್ರಮ ಪಟ್ಟರೆ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬ ಮಾತುಗಳ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾರ್ಗದರ್ಶನದ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ರೆ.ಫಾ. ಪೌಲ್ ಜೇಕಬ್, ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿಯದ ಶ್ರೀ ಸೈಮನ್ ಕೆ ಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜ್ಯೋತಿ ಯೆಸ್.ಕೆ, ಗೈಡ್ ಶಿಕ್ಷಕಿ ಶ್ರೀಮತಿ ಪ್ರಿಯಾ.ಏ, ಸ್ಕೌಟ್ ಮಾಸ್ಟರ್ ವಿಶ್ವತ್ ಪಿ, ಶಾಲಾ ಶಿಕ್ಷಕರು, ಶಿಕ್ಷಕೇತರ ವರ್ಗ, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ಕು| ಅಕ್ಷತಾ ಕೆ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸಂಗೀತ ವಂದಿಸಿ, ಸಹ ಶಿಕ್ಷಕಿ ಶ್ರೀಮತಿ ಪ್ರಭಾವತಿ ನಿರೂಪಿಸಿದರು.

Scroll to Top