ಗುಜಾರಾತಿ ಬೆಡಗಿ ಮುಡಿಗೆರಿಸಿಕೊಂಡ ಮಿಸ್ ಯೂನಿವರ್ಸ್ ಇಂಡಿಯಾ-2024 ರ ಕಿರೀಟ

(ನ್ಯೂಸ್ ಕಡಬ) newskadaba.com ಜೈಪುರ 23: ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಗುಜರಾತಿ ಬೆಡಗಿ ರಿಯಾ ಸಿಂಘಾ  ಇವರು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್‌ ಯೂನಿವರ್ಸ್‌ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಸಂತಸ ವ್ಯಕ್ತಪಡಿಸಿದ್ದಾರೆ.ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಮಟ್ಟಕ್ಕೆ ಹೋಗಲು ನಾನು ತುಂಬಾ ಕೆಲಸ ಮಾಡಿದ್ದೇನೆ. ಈ ಕಿರೀಟಕ್ಕೆ ನಾನು ಸಾಕಷ್ಟು ಅರ್ಹಳೆಂದು ಪರಿಗಣಿಸಬಹುದು ಎಂದು ತಿಳಿಸಿದ್ದಾರೆ.

Also Read  ಚರಂಡಿಗೆ ಬಿದ್ದು ಬಾಲಕಿಯರಿಬ್ಬರು ಮೃತ್ಯು..!

error: Content is protected !!
Scroll to Top