ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 23. ದಸರಾಗೆ ಮಾತ್ರ ಕುಸ್ತಿ ಪಂದ್ಯಾವಳಿ ಸೀಮಿತಗೊಳ್ಳದೆ ರಾಷ್ಟ್ರಮಟ್ಟಕ್ಕೂ ಕೊಂಡೊಯ್ಯುವ ಕೆಲಸವನ್ನು ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.


ನಗರದ ದೊಡ್ಡಕೆರೆ ಮೈದಾನದ ವಸ್ತು ಪ್ರದರ್ಶನದ ಆವರಣದಲ್ಲಿರುವ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ರವಿವಾರ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು. ‘ಕ್ರೀಡೆ ಜನರನ್ನು ಒಟ್ಟಿಗೆ ಕೊಂಡೊಯ್ಯುವಂತೆ ಮಾಡುತ್ತದೆ. ಕುಸ್ತಿ ಕ್ರೀಡೆಯನ್ನು ಉಳಿಸಿ ಬೆಳೆಸಿ ರಾಷ್ಟ್ರಮಟ್ಟಕ್ಕೆ ಕ್ರೀಡಾಪಟುಗಳನ್ನು ಕೊಂಡೊಯ್ಯುವಂತೆ ಮಾಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದಾಗಿ’ ತಿಳಿಸಿದರು. ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಎಸ್ಪಿ, ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಡಿವೈಎಸ್ಪಿ ರಘು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Also Read  ಕಡಬ ಸಹಿತ 49 ಹೊಸ ತಾಲೂಕುಗಳಿಗೆ ಸಂಪುಟ ಅನುಮೋದನೆ ► 2018 ಜನವರಿ 01ರಿಂದ ಅಸ್ತಿತ್ವಕ್ಕೆ

 

error: Content is protected !!
Scroll to Top