‘PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ’-ಸಂಸದ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು 23: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿಯಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್ ಸೆಂಟರ್ ನ ಎರಡನೇ ಮಹಡಿಯಲ್ಲಿ ಜಿಲ್ಲಾ ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡ ನಿರ್ಮಾಣ ಮಾಡಲು 1.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಮಟ್ಟದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗೆ ಮತ್ತಷ್ಟು ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಅನುದಾನವನ್ನು ಬಿಡುಗಡೆಗೊಳಿಸಿದೆ. ಈಗಾಗಲೇ ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಕ್ಯಾ. ಚೌಟ ಹೇಳಿದ್ದಾರೆ.

Also Read  ಮಂಗಳೂರು: ಏರ್ ಪೋರ್ಟ್ ಪ್ರವೇಶ ದ್ವಾರ ಬಳಿ 'ಕೈ' ಕಾರ್ಯಕರ್ತರ ಮುತ್ತಿಗೆ ಯತ್ನ

error: Content is protected !!
Scroll to Top