ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಸರ್ಕಾರ

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 23. ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನದ ಟ್ರಸ್ಟ್ ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು. ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.

Also Read  SSLC ಪಾಸಾದವರಿಗೆ 39,481 ಹುದ್ದೆಗಳ ಲಭ್ಯತೆ- ಅ.14 ಅರ್ಜಿ ಸಲ್ಲಿಸಲು ಕೊನೇ ದಿನ

 

error: Content is protected !!
Scroll to Top